ಮೈಸೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.
ಮೂರು ಕ್ಷೇತ್ರಳಿಗೂ ನವೆಂಬರ್ 13 ರಂದು ಮತದಾನ ನಡೆದಿತ್ತು. ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಬಹುತೇಕ ಸ್ಪಷ್ಟವಾದ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಎಲ್ಲ ಕೇಂದ್ರಗಳಲ್ಲಿಯೂ ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆಗೂ ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಬಿಜೆಪಿ-ಜಾ. ದಳ ಮೈತ್ರಿಕೂಟ ಗೆಲ್ಲುವ ಸಾಧ್ಯತೆಯಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಇದೆ. ಹೀಗಾಗಿ ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಮೂರು ಕ್ಷೇತ್ರದ ಫಲಿತಾಂಶ ಮಧ್ಯಾಹ್ನದ ವೇಳೆಗೆ ಸಿಗುವ ನಿರೀಕ್ಷೆ ಇದೆ.