Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಈರುಳ್ಳಿ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು?

ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್‌ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಆರ್‌ಬಿಐ ಗೌರ್ನರ್ ಶಕ್ತಿಕಾಂತ್‌ ಅವರು ಡಿಸೆಂಬರ್‌ನಲ್ಲಿ ತರಕಾರಿ ಬೆಲೆಗಳು ಏರಿಕೆಯಾಗಬಹುದು, ನವೆಂಬರ್‌ ಹಾಗೂ ಡಿಸೆಂಬರ್‌ ಎರಡೂ ತಿಂಗಳಿನಲ್ಲಿಯೂ ಹಣದುಬ್ಬರ ಉಂಟಾಗಬಹುದು ಎಂದು ಎಚ್ಚರಿಸಿದ್ದ ಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಈ ಹಿಂದೆ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸಲು ಕನಿಷ್ಠ ರಫ್ತು ಬೆಲೆಯನ್ನು ಪ್ರತಿ ಮೆಟ್ರಿಕ್‌ ಟನ್‌ಗೆ 800 ರೂಪಾಯಿಗಳಷ್ಟು ವಿಧಿಸಿತ್ತು. ಈ ದರ 31ಕ್ಕೆ ಕೊನೆಯಾಗಲಿದ್ದು, ಬಳಿಕ ಮಾರ್ಚ್‌ 31ರವರೆಗೆ ರಫ್ತು ನಿಷೇಧವಾಗಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ