ಬೆಂಗಳೂರು: ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಶಾಸಕ ರವಿಕುಮಾರ್ ಗಣಿಗ ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ. ಆರೋಪಕ್ಕೆ ಸಾಕ್ಷಿಗಳಿದ್ದರೆ ಅದನ್ನೆಲ್ಲಾ ಬಹಿರಂಗಪಡಿಸಬೇಕು. ಎಷ್ಟು ಕೋಟಿ ಆಫರ್ ನೀಡಿದ್ದರು ಎಂಬುದರ ಬಗ್ಗೆ ಸಾಕ್ಷ್ಯ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.
ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.