ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ಗೆ ತನ್ನ ಅಭ್ಯರ್ಥಿಯನ್ನು ಯಾವ ಪಕ್ಷದ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬುದೆ ಚಿಂತೆಯಾಗಿದೆ. ಹೀಗಿರುವಾಗಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿ.ಪಿ ಯೋಗೇಶ್ವರ್ ಅವರಿಗರ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ಅಶ್ವತ್ಥ್ ನಾರಾಯಣ ಸಿ.ಪಿ ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದೇವೆ. ಹಾಗೆ ಎಚ್.ಡಿ ಕುಮಾರಸ್ವಾಮಿ ಅವರ ಜೊತೆ ಕೂಡ ಚರ್ಚೆ ಮಾಡಿದ್ದೇವೆ. ಸಿ.ಪಿ ಯೋಗೇಶ್ವರ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಕೇಳುತ್ತೇವೆ ಎಂದರು.
ಆದರೆ, ಸಿ.ಪಿ ಯೋಗೇಶ್ವರ್ ಅವರನ್ನು ಯಾವ ಚಿಹ್ನೆಯಡಿ ಕಣಕ್ಕಿಳುಸುತ್ತಾರೆ ಎಂಬುದನ್ನ ಸ್ಪಷ್ಟಪಡಿಸಿಲ್ಲ.