Mysore
18
broken clouds

Social Media

ಗುರುವಾರ, 01 ಜನವರಿ 2026
Light
Dark

ಕುಮಾರಸ್ವಾಮಿ ತಮ್ಮ ಪ್ರತಿಷ್ಠೆಗೆ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ: ಸಿ.ಪಿ.ಯೋಗೇಶ್ವರ್‌ ಲೇವಡಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್‌ ಲೇವಡಿ ಮಾಡಿದ್ದಾರೆ.

ಚನ್ನಪಟ್ಟಣದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕುಮಾರಸ್ವಾಮಿ ಮನಸ್ಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಎಂಪಿ ಚುನಾವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದ್ದರು. ಈಗ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯಿಸಿ ಮಗನನ್ನು ಬಲಿಕೊಟ್ಟಿದ್ದಾರೆ ಎಂದು ಟೀಕಿಸಿದರು.

ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್‌ ಸೋಲಿನ ಮೂಲಕ ಜೆಡಿಎಸ್‌ ಕೊನೆಯ ದಿನಗಳನ್ನು ಎಣಿಸುತ್ತಿದೆ ಎಂದರು.

ದೇವೇಗೌಡರಿಗೆ ವಯಸ್ಸಾಗಿದೆ. ಆದ್ದರಿಂದ ಅವರನ್ನು ಜನ ತಿರಸ್ಕರಿಸಿದ್ದಾರೆ. ಈಗ ದೇವೇಗೌಡರು ವಿಶ್ರಾಂತ ಜೀವನ ನಡೆಸುವುದು ಸೂಕ್ತ ಎಂದರು.

ನಾನು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಡಾ.ಮಂಜುನಾಥ್‌ ಪರ ಕೆಲಸ ಮಾಡಿದ್ದೆ. ಅದರಿಂದಾಗಿ ಡಿ.ಕೆ.ಸುರೇಶ್‌ಗೆ ಸೋಲಾಗಿತ್ತು. ಆದರೆ ಈ ಚುನಾವಣೆಯಲ್ಲಿ ಅವರಿಂದಲೇ ನನಗೆ ಗೆಲುವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

Tags:
error: Content is protected !!