ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿದ್ದಾರೆ.
ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಹಲವಾರು ವಿಚಾರಗಳು ಕುರಿತು ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಾದ ಸಚಿವರ ಮೇಲಿನ ಹನಿಟ್ರ್ಯಾಪ್ ಪ್ರಕರಣ, ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ 4 ಎಂಎಲ್‌ಸಿ ಸ್ಥಾನಗಳು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಸೇರಿ ರಾಜ್ಯದ ಅಭಿವೃದ್ದಿ ವಿಚಾರದ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.





