ನವದೆಹಲಿ: ದೆಹಲಿ ವಿಧಾನಸಭೆ ಅಧವೇಶನ ಇಂದಿನಿಂದ ಪ್ರಾರಂಭವಾಗಿದ್ದು, ದೆಹಲಿ ಸಿಎಂ ಆಗಿರುವ ರೇಖಾ ಗುಪ್ತಾ ಸೇರಿದಂತೆ ಸಚಿವ ಸಂಪುಟದ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೆಹಲಿಯ ವಿಧಾನಸಭೆಯಲ್ಲಿ ಇಂದು(ಫೆಬ್ರವರಿ.24) ಲೆಫ್ಟಿನೆಂಟ್ ಗರ್ವನರ್ ವಿ.ಕೆ.ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರಿಗೆ ಪ್ರಮಾಣ ವಚನ ಬೋಧಿಸಿದ್ದು, ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇನ್ನು ಇಂದು ಮಧ್ಯಾಹ್ನದ ವೇಳೆಗೆ ವಿಧಾನಸಭೆ ಸ್ಪೀಕರ್ ಅವರ ನೇಮಕ ನಡೆಯಲಿದೆ. ಅಲ್ಲದೇ ನಾಳೆ(ಫೆಬ್ರವರಿ.25) ಲೆಫ್ಟಿನೆಂಟ್ ಗರ್ವನರ್ ವಿ.ಕೆ.ಸಕ್ಸೇನಾ ಅವರು ವಿಧಾನ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮಹಾಲೇಖಪಾಲರ ವರದಿಗಳನ್ನು ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಸಚಿವ ಪರ್ವೇಶ್ ವರ್ಮಾ ಅವರು ಮಾತನಾಡಿ, ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರ ಸಾರ್ವಜನಿಕರ ನಿರೀಕ್ಷೆಗಳನ್ನು ಈಡೇರಿಸಲಿದೆ. ಅಲ್ಲದೇ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದ್ದಾರೆ.