Categories: Uncategorized

ದೆಹಲಿ ವಿಧಾನಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ರೇಖಾ ಗುಪ್ತಾ, ಸಚಿವರು

ನವದೆಹಲಿ: ದೆಹಲಿ ವಿಧಾನಸಭೆ ಅಧವೇಶನ ಇಂದಿನಿಂದ ಪ್ರಾರಂಭವಾಗಿದ್ದು, ದೆಹಲಿ ಸಿಎಂ ಆಗಿರುವ ರೇಖಾ ಗುಪ್ತಾ ಸೇರಿದಂತೆ ಸಚಿವ ಸಂಪುಟದ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೆಹಲಿಯ ವಿಧಾನಸಭೆಯಲ್ಲಿ ಇಂದು(ಫೆಬ್ರವರಿ.24) ಲೆಫ್ಟಿನೆಂಟ್‌ ಗರ್ವನರ್‌ ವಿ.ಕೆ.ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್‌ ಸಿಂಗ್‌ ಲವ್ಲಿ ಅವರಿಗೆ ಪ್ರಮಾಣ ವಚನ ಬೋಧಿಸಿದ್ದು, ವಿಧಾನಸಭೆಯ ಹಂಗಾಮಿ ಸ್ಪೀಕರ್‌ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಇಂದು ಮಧ್ಯಾಹ್ನದ ವೇಳೆಗೆ ವಿಧಾನಸಭೆ ಸ್ಪೀಕರ್‌ ಅವರ ನೇಮಕ ನಡೆಯಲಿದೆ. ಅಲ್ಲದೇ ನಾಳೆ(ಫೆಬ್ರವರಿ.25) ಲೆಫ್ಟಿನೆಂಟ್‌ ಗರ್ವನರ್‌ ವಿ.ಕೆ.ಸಕ್ಸೇನಾ ಅವರು ವಿಧಾನ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಮಹಾಲೇಖಪಾಲರ ವರದಿಗಳನ್ನು ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಸಚಿವ ಪರ್ವೇಶ್‌ ವರ್ಮಾ ಅವರು ಮಾತನಾಡಿ, ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರ ಸಾರ್ವಜನಿಕರ ನಿರೀಕ್ಷೆಗಳನ್ನು ಈಡೇರಿಸಲಿದೆ. ಅಲ್ಲದೇ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

9 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

11 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

13 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

13 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

14 hours ago