Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ನನ್ನ ಮೇಲೆ ಸುಳ್ಳು ಕೇಸ್‌ ಹಾಕಿಸುವ ಕೆಲಸ ಮಾಡಿಲ್ಲ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡರು ಮಗನ ಜೊತೆ ಜೈಲಿನಲ್ಲಿರಬೇಕಿತ್ತು ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮೇಲೆ ಯಾರೂ ಕೂಡ ರಾಜಕೀಯವಾಗಿ ದೂರು ಕೊಟ್ಟಿಲ್ಲ. ನನ್ನ ಮೇಲೆ ಯಾವ ಕೇಸ್‌ ಇದೆ ತೋರಿಸಲಿ. ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳಲಿಕ್ಕೆ ರಾಜಕೀಯ ಮಾಡಿದ್ದಾರೆ. ನನ್ನನ್ನು ಸೋಲಿಸಲಿಕ್ಕೆ ಪ್ರಯತ್ನ ಮಾಡಿದ್ದಾರೆ. ಆದರೆ ಸುಳ್ಳು ಕೇಸ್‌ ಹಾಕಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ನಾನು ಸಾಧ್ಯವಾದಷ್ಟು ಮಾಧ್ಯಮಗಳಿಂದ ದೂರವಿದ್ದೇನೆ. ಏನು ಮಾತನಾಡಬೇಕು, ಏನು ಮಾತನಾಡಬಾರದು ಎಂದು ನನ್ನ ಮನಸ್ಸಿನಲ್ಲಿ ತೀರ್ಮಾನ ಮಾಡಿದ್ದೀನಿ. ಆದರೆ ಯಾಕೆ ನನ್ನ ಹೆಸರನ್ನೇ ಪದೇ ಪದೇ ಮಾತನಾಡುತ್ತಿದ್ದಾರೆ ಗೊತ್ತಿಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಜನರ ಸಮಸ್ಯೆ ಆಲಿಸೋದು. ಅಭಿವೃದ್ಧಿ ಮಾಡೋದನ್ನು ಬಿಟ್ಟು ನನಗೆ ಬೇರೆ ಏನೂ ಕೆಲಸ ಇಲ್ಲ ಎಂದರು.

ಇನ್ನು ಯಾವ ಅರ್ಥದಲ್ಲಿ ರೇವಣ್ಣ ಈ ರೀತಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ನನ್ನನ್ನು ಅರೆಸ್ಟ್‌ ಮಾಡ್ತಾರೆ ಬಿಡಿಸಿಕೊಡಿ ಎಂದು ಯಾರ ಬಳಿಯೂ ಕೂಡ ಕೇಳಿಲ್ಲ. ರೇವಣ್ಣನವರೇ ದಯವಿಟ್ಟು ಕ್ಷಮಿಸಿ. ನನ್ನನ್ನು ಯಾರೂ ಕೂಡ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ರೇವಣ್ಣರನ್ನೇ ಕೇಳುತ್ತೇನೆ ಎಂದು ಕಿಡಿಕಾರಿದರು.

Tags:
error: Content is protected !!