ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.
ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಸದಸ್ಯರು, ಮುಖ್ಯಾಧಿಕಾರಿ ಮಹೇಶ್ ಕುಮಾರ್ ಗೌರವಿಸಿ ಬರಮಾಡಿಕೊಂಡರು.
2003ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರು, ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕು ಕೇಂದ್ರದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಿದ್ದರು. ಆದರೆ ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಘೋಷಣೆಯಾಗದೇ ಇದ್ದುದರಿಂದ ಕ್ಯಾಂಟೀನ್ ಪ್ರಾರಂಭವಾಗಿರಲಿಲ್ಲ. ಇದೀಗ ಹನೂರು ತಾಲ್ಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದ್ದು, ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಂತರ ಕ್ಯಾಂಟೀನ್‌ನಲ್ಲಿ ತಯಾರು ಮಾಡಲಾಗಿದ್ದ ಉಪ್ಪಿಟ್ಟು, ಕೇಸರಿಬಾತ್ ಸವಿದರು.
ನಂತರ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ತೆರಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕ ಎಂ.ಆರ್.ಮಂಜುನಾಥ್, ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ನಗರಾಭಿವೃದ್ಧಿ ಕೋಶದ ಯೋಜನಾಽಕಾರಿ ಸುಧಾ, ಎಇಇ ರಾಮಚಂದ್ರ, ಸದಸ್ಯರಾದ ಗಿರೀಶ್, ಹರೀಶ್, ಸುದೇಶ್, ಸಂಪತ್, ಸೋಮಶೇಖರ್, ಮಹೇಶ್ ನಾಯ್ಕ, ಲತಾಮಣಿ ಮಂಜುಳಾ, ಮಹಾದೇಶ್, ನವೀನ್, ಬಸವರಾಜು, ಮಹೇಶ್, ಪಪಂ ಸಿಬ್ಬಂದಿ ವರ್ಗದವರು, ಇನ್ನಿತರರು ಹಾಜರಿದ್ದರು.



