Uncategorized

ಹನೂರು | ಇಂದಿರಾ ಕ್ಯಾಂಟೀನ್‌ ಉದ್ಘಾಟಿಸಿದ ಸಿಎಂ

ಹನೂರು: ಪಟ್ಟಣದಲ್ಲಿ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟೀನ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.

ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಉಪಾಧ್ಯಕ್ಷ ಆನಂದ್ ಕುಮಾರ್, ಸದಸ್ಯರು, ಮುಖ್ಯಾಧಿಕಾರಿ ಮಹೇಶ್ ಕುಮಾರ್ ಗೌರವಿಸಿ ಬರಮಾಡಿಕೊಂಡರು.

2003ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಹಿಂದುಳಿದ ವರ್ಗದವರು, ಬಡವರು, ಕೂಲಿ ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ತಾಲ್ಲೂಕು ಕೇಂದ್ರದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಿದ್ದರು. ಆದರೆ ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಘೋಷಣೆಯಾಗದೇ ಇದ್ದುದರಿಂದ ಕ್ಯಾಂಟೀನ್ ಪ್ರಾರಂಭವಾಗಿರಲಿಲ್ಲ. ಇದೀಗ ಹನೂರು ತಾಲ್ಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದ್ದು, ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ನಂತರ ಕ್ಯಾಂಟೀನ್‌ನಲ್ಲಿ ತಯಾರು ಮಾಡಲಾಗಿದ್ದ ಉಪ್ಪಿಟ್ಟು, ಕೇಸರಿಬಾತ್ ಸವಿದರು.

ನಂತರ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ತೆರಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕ ಎಂ.ಆರ್.ಮಂಜುನಾಥ್, ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ನಗರಾಭಿವೃದ್ಧಿ ಕೋಶದ ಯೋಜನಾಽಕಾರಿ ಸುಧಾ, ಎಇಇ ರಾಮಚಂದ್ರ, ಸದಸ್ಯರಾದ ಗಿರೀಶ್, ಹರೀಶ್, ಸುದೇಶ್, ಸಂಪತ್, ಸೋಮಶೇಖರ್, ಮಹೇಶ್ ನಾಯ್ಕ, ಲತಾಮಣಿ ಮಂಜುಳಾ, ಮಹಾದೇಶ್, ನವೀನ್, ಬಸವರಾಜು, ಮಹೇಶ್, ಪಪಂ ಸಿಬ್ಬಂದಿ ವರ್ಗದವರು, ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

5 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

5 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

6 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

6 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

6 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

8 hours ago