ನವದೆಹಲಿ: ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ ಅನ್ಯಾಯ ಸರಿದೂಗಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಸಚಿವರಾದ ಭೈರತಿ ಸುರೇಶ್, ಚಲುವರಾಯಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಭೇಟಿಯಾಗಿದ್ದೆವು. ನಬಾರ್ಡ್‌ನ ಕೃಷಿ ಸಾಲವನ್ನು ಶೇಕಡಾ.58 ರಷ್ಟು ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತ ಕಾಯುವಂತೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.