ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ದೇಶದ ಜನತೆ ಬಳಿ ಕ್ಷಮೆ ಕೇಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳನ್ನೇ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಾಕ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಹೀಗಿರುವಾಗ ಸಿಎಂ ಸಿದ್ದರಾಮಯ್ಯ ಪಾಕ್ ವಿರುದ್ಧ ಯುದ್ಧದ ಅನಿವಾರ್ಯತೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಾಕ್ ವಿರುದ್ಧ ಯುದ್ಧ ಮಾಡಬಾರದು ಎಂಬ ದೃಷ್ಟಿಕೋನ ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗಾಗಿ ಸಿಎಂ ಸಿದ್ದರಾಮಯ್ಯ ದೇಶದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.





