ಮಂಗಳೂರು: ರಾಜ್ಯದಲ್ಲಿ ಹಣ, ಹೆಂಡ ಹಂಚಿಕೆಯಲ್ಲಿ ಬಿಜೆಪಿಯವರಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ ಎಂದು ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಇದಕ್ಕೆ ಪ್ರಮುಖ ಕಾರಣವೇನು ಎಂಬುದನ್ನು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್ ಬಹಿರಂಗಪಡಿಸಿದ್ದಾರೆ.
ಕರ್ನಾಟಕದಲ್ಲಿ ಹಣ, ಹೆಂಡದ ಹಂಚಿಕೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಪೈಪೋಟಿ ನೀಡಿದೆ. ಬಿಜೆಪಿಯವರಿಗೆ ಸರಿಸಮನಾಗಿ ಕಾಂಗ್ರೆಸ್ ಕೂಡ ಖರ್ಚು ಮಾಡಿದೆ ಎಂದು ಹರಿಪ್ರಸಾದ್ ಹೇಳುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಬೇರೆ ಬೇರೆ ರಾಜ್ಯದ ಚುನಾವಣಾ ಫಲಿತಾಂಶ ನೋಡಿದಾಗ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದು ಇತಿಹಾಸ ಸೃಷ್ಟಿ ಮಾಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನ ಬಿಜೆಪಿ ಹಾಗೂ ಜೆಡಿಎಸ್‌ನವರು ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದರು. ಅದಕ್ಕೆ ನಾವು ಕೂಡ ಬಿಜೆಪಿಗೆ ಪೈಪೋಟಿ ನೀಡಿದ್ದೇವೆ ಎಂದು ಚುನಾವಣೆಗಾಗಿ ಕರ್ನಾಟಕದಲ್ಲಿ ಹಣ-ಹೆಂಡ ನೀಡಿದ್ದಾಗಿ ಸ್ವತಃ ಒಪ್ಪಿಕೊಂಡಿದ್ದಾರೆ.





