Mysore
21
mist

Social Media

ಗುರುವಾರ, 29 ಜನವರಿ 2026
Light
Dark

ಅದಾನಿ ಲಂಚ ಪ್ರಕರಣ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಕಿಡಿ

ನವದೆಹಲಿ: ಅಮೆರಿಕಾ ಕೋರ್ಟ್‌ನಲ್ಲಿ ಗೌತಮ್‌ ಅದಾನಿ ವಿರುದ್ಧ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕುರಿತು ಚರ್ಚೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್‌ ಸಂಸದ ಮಾಣಿಕ್ಯಂ ಟಾಗೋರ್‌ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿ ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅದಾನಿ ವಿಷಯದಲ್ಲಿ ಯಾಕೆ ಮೌನವಹಿಸುತ್ತಿದೆ? ಎಂದು ಪ್ರಶ್ನಿಸಿದ ಅವರು, ಮೋದಿ ಅವರು ಅದಾನಿ ಜೊತೆಗಿನ ಗೆಳೆತನಕ್ಕೆ ಸಂಬಂಧಿಸಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಬೇಕು. ಇದರಿಂದಾಗಿ ಭಾರತದ ಸಮಗ್ರತೆ ಹಾಗೂ ಜಾಗತಿಕ ಸ್ಥಾನಮಾನದ ಬಗ್ಗೆ ಚರ್ಚೆ ಮಾಡಿದಂತೆ ಆಗುತ್ತದೆ ಎಂದು ಆಗ್ರಹಿಸಿದರು.

ಇನ್ನು ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರು ಮುಖ್ಯಮಂತ್ರಿಯಾಗಿ ಸರ್ಕಾರದಲ್ಲಿ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ 1,750 ಕೋಟಿ ಲಂಚ ನೀಡಿದ್ದಾರೆ ಎಂದು ಆರೋಪಿಸಿ, ಆಂಧ್ರದ ಇಂದಿನ ಸರ್ಕಾರ ಎಸ್‌ಇಸಿಐಯೊಡನೆ ಮಾಡಿಕೊಂಡಿರುವ ಸೌರ ವಿದ್ಯುತ್‌ ಒಪ್ಪಂದವನ್ನು ರದ್ದುಗೊಳಿಸಲು ಚಿಂತನೆ ನಡೆಸುತ್ತಿದೆ. ಈ ಆರೋಪಗಳ ಬಗ್ಗೆ ಕೂಡಲೇ ಚರ್ಚೆ ನಡೆಸಬೇಕು ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.ಹ

Tags:
error: Content is protected !!