Uncategorized

ಜಾತಿ ಜನಗಣತಿ ಬಿಡುಗಡೆ ಮಾಡಿದ ದಿನವೇ ಕಾಂಗ್ರೆಸ್‌ ಇರಲ್ಲ: ಕೆ.ಎಸ್ ಈಶ್ವರಪ್ಪ

ಹಾವೇರಿ : ಜಾತಿಗಣತಿ ಬಗ್ಗೆ ಎಲ್ಲರಲ್ಲಿಯೂ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವಾಗಿದೆ. ಜಾತಿ ಗಣತಿ ಬಿಡುಗಡೆ ಮಾಡಿದರೆ, ಮಾಡಿದ ದಿನವೇ ಕಾಂಗ್ರೆಸ್‌ ಸರ್ಕಾರ ಇರಲ್ಲ ಎಂದು ಕೆ ಎಸ್‌ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಗೆಹರಿಯದ ಹಲವಾರು ಸಮಸ್ಯೆಗಳಿವೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಕರ್ನಾಟಕ ಸರ್ಕಾರ ಹೈ ಕಮಾಂಡ್‌ನ ಎಟಿಎಂ ಆಗಿದೆ ಆದರೆ, ಕ್ಷೇತ್ರದ ಅಭಿವೃದ್ಧಿಗೆ ಹಣ ಮಾತ್ರ ಕೊಡುತ್ತಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಡಿಕೆಶಿ ತನಿಖೆಯನ್ನು ಸಿಬಿಐ ಮುಂದುವರೆಸಲು ಯಾವುದೇ ಅಭ್ಯಂತರ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ. ಡಿಕೆ ಶಿವಕುಮಾರ್‌ ಅವರು ಲೋಕಸಭಾ ಚುನವಾಣೆ ಮೊದಲು ಅಥವಾ ನಂತರ ಜೈಲಿಗೆ ಹೋಗುತ್ತಾರೆ. ಆದರೆ ಯಾವಾಗ ಹೋಗುತ್ತಾರೆ ಎಂಬುದು ತೀರ್ಮಾನವಾಗಬೇಕಿದೆ. ಅಕ್ರಮ ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ. ಈ ಅಕ್ರಮದಲ್ಲಿ ಹಣ ಸಿಕ್ಕಿರುವ ಬಗ್ಗೆ ರಾಜ್ಯದ ಜನರೇ ನೋಡಿದ್ದಾರೆ. ಡಿಸಿಎಂ ಜೈಲಿಗೆ ಹೋಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ನುಡಿದರು.

ಹಿಂದಿನ ಬಿಜೆಪಿ ಸರ್ಕಾರ ಸಾಲ ಮಾಡಿದೆ ಅಂತ ಗೊತ್ತಿದ್ದರೂ ಬಡ ಜನರಿಗೆ ಮೋಸ ಮಾಡಲೆಂದೇ ಗ್ಯಾರಂಟಿಗಳನ್ನು ಯಾಕೆ ಘೋಷಣೆ ಮಾಡಿದ್ದೀರಾ ಎಂದು ಎಂದು ಕಾಂಗ್ರೆಸ್‌ ಸರ್ಕಾರವನ್ನು ಪ್ರಶ್ನಿಸಿದರು.

andolanait

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

8 mins ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

9 mins ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

15 mins ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

23 mins ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

28 mins ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

14 hours ago