Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ದಿಕ್ಕಿಗೆ ಗಾಳಿ ಬಲಗೊಳ್ಳುವ ಸಾಧ್ಯತೆಯಿದೆ. ಚಂಡಮಾರುತ ಶ್ರೀಲಂಕಾ ಮತ್ತು ತಮಿಳುನಾಡು ಕರಾವಳಿಯ ಉತ್ತರ ಮತ್ತು ವಾಯುವ್ಯ ದಿಕ್ಕಿನೆಡೆಗೆ ಸಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಈ ಬಾರಿ ನವೆಂಬರ್‌ನಲ್ಲೇ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಗೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನು ವಿಪರೀತ ಚಳಿಯಿಂದ ಜ್ವರ, ಕೆಮ್ಮು, ಶೀತದಂತಹ ಕಾಯಿಲೆಗಳು ಭಾದಿಸಲಿದ್ದು, ಆರೋಗ್ಯದ ಮೇಲೆ ಹೆಚ್ಚಿನ ನಿಗಾ ಇಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

 

Tags: