Mysore
22
clear sky

Social Media

ಬುಧವಾರ, 21 ಜನವರಿ 2026
Light
Dark

ಪಾಕ್‌ ಶೆಲ್‌ ದಾಳಿಗೆ ಜಮ್ಮು-ಕಾಶ್ಮೀರದಲ್ಲಿ ಮೃತರ ಸಂಖ್ಯೆ 7ಕ್ಕೇರಿಕೆ

ಶ್ರೀನಗರ: ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ಕೊನೆಗೊಳಿಸಲು ಒಪ್ಪುವ ಕೆಲವೇ ಗಂಟೆಗಳ ಮೊದಲು ಜಮ್ಮು-ಕಾಶ್ಮೀರದಲ್ಲಿ ಸಾವು-ನೋವುಗಳ ವರದಿಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಶನಿವಾರ ಪಾಕಿಸ್ತಾನ ನಡೆಸಿದ ತೀವ್ರ ಮೋರ್ಟಾರ್‌ ಶೆಲ್ಲಿಂಗ್‌ ಮತ್ತು ಡ್ರೋನ್‌ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಎಂ ಓಮರ್‌ ಅಬ್ದುಲ್ಲಾ ಅವರು, ಶೆಲ್‌ ದಾಳಿ ಪೀಡಿತ ವಸತಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಾಳಿಯಲ್ಲಿ ಮೃತಪಟ್ಟ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬದವರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

Tags:
error: Content is protected !!