ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿನಲ್ಲೂ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆರೋಗ್ಯ ಅಧಿಕಾರಿಗಳು ಹಾಗೂ ಸಚಿವರ ಸಭೆ ಕರೆಯಲಾಗಿತ್ತು.
ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಿದ ಸಿದ್ದರಾಮಯ್ಯ, ಡೆಂಗ್ಯೂ ಪ್ರಕರಣ ಹೆಚ್ಚಾಗದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅಶುಚಿತ್ವ ಹಾಗೂ ಸೊಳ್ಳೆಗಳಿಂದ ಡೆಂಗ್ಯೂ ಪ್ರಕರಣ ಜಾಸ್ತಿಯಾಗುತ್ತಿದೆ. ಮಳೆ ಬೀಳುತ್ತಿರುವ ಪರಿಣಾಮ ಅಲ್ಲಲ್ಲಿ ನೀರು ನಿಂತುಕೊಂಡು ಸೊಳ್ಳೆಗಳು ತುಂಬಾ ಜಾಸ್ತಿಯಾಗುತ್ತಿವೆ. ಇದರಿಂದ ಮಕ್ಕಳಿಗೆ ಡೆಂಗ್ಯೂ ಹರಡುತ್ತಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ.
ಬಳಿಕ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಆಯಾಯ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಡೆಂಗ್ಯೂ ಬಗ್ಗೆ ಮನೆ ಮನೆಗೆ ತೆರಳಿ ಅರಿವು ಮೂಡಿಸಬೇಕು. ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಜನರಿಗೆ ತಿಳುವಳಿಕೆ ನೀಡಬೇಕು. ಆಗ ಮಾತ್ರ ಡೆಂಗ್ಯೂ ಪ್ರಕರಣ ಜಾಸ್ತಿಯಾಗದಂತೆ ನಾವು ತಡೆಯಬಹುದು ಎಂದರು. ಇದರ ಜೊತೆಗೆ ಡೆಂಗ್ಯೂಗೆ ತುತ್ತಾಗಿರುವ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಆಸ್ಪತ್ರೆಗಳಿಗೆ ಸೂಚನೆ ನೀಡಬೇಕು.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…