Mysore
26
broken clouds

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ʼ ಮುಂದಿನ ಸಿಎಂ ಡಿಕೆ ಶಿವಕುಮಾರ್‌ʼ ಎಂದು ಘೋಷಣೆ ಕೂಗಿದ ಡಿಕೆಶಿ ಬೆಂಬಲಿಗರು !

ಹುಬ್ಬಳ್ಳಿ :  ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾಳೆ ದೆಹಲಿಯಲ್ಲಿ ಚುನಾವಣೆ ಸಮಿತಿ ಸಭೆ ಇದೆ. ಈ ಒಂದು ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೋಗುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದ್ದು ನಂತರ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತದೆ ಎಂದು ತಿಳಿಸಿದರು.

ವಿವಿಧ ಕಾಮಗಾರಿ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಅಥಣಿಗೆ ತೆರಳುತ್ತಿದ್ದೇನೆ. ಸಿಎಂ ಸಿದ್ದರಾಮಯ್ಯ ಕೂಡ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. 1,26,000 ಕೋಟಿ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ ಎಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಇದೇ ವೇಳೆ ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಘೋಷಣೆ ಕೂಗಿದ ಕೈ ಕಾರ್ಯಕರ್ತರು ಕಾರ್ಯಕ್ರಮದ ನಿಮಿತ್ಯ ಇಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ