Mysore
16
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಭಾರತ-ಪಾಕ್‌ ನಾಯಕತ್ವದ ಬಗ್ಗೆ ಹೆಮ್ಮೆಯಿದೆ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು, ಕಾಶ್ಮೀರ ವಿವಾದಲ್ಲಿ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಲು ತಯಾರಿದ್ದೇನೆ ಎಂದು ಹೇಳಿದ್ದಾರೆ.

ಪ್ರಸ್ತು ಆಕ್ರಮಣವನ್ನು ನಿಲ್ಲಿಸುವ ಸಮಯ ಎಂದು ಅರ್ಥಮಾಡಿಕೊಂಡಿದ್ದಕ್ಕಾಗಿ ಭಾರತ ಮತ್ತು ಪಾಕಿಸ್ತಾನ ನಾಯಕರಿಗೆ ಧನ್ಯವಾದಗಳ್ನನು ಅರ್ಪಿಸುತ್ತೇನೆ. ಅವರ ಧೈರ್ಯಶಾಲಿ ಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:- ಪಾಕ್‌ ಶೆಲ್‌ ದಾಳಿಗೆ ಜಮ್ಮು-ಕಾಶ್ಮೀರದಲ್ಲಿ ಮೃತರ ಸಂಖ್ಯೆ 7ಕ್ಕೇರಿಕೆ 

ಭಾರತ ಹಾಗೂ ಪಾಕಿಸ್ತಾನದ ಬಲವಾದ ಮತ್ತು ಅಚಲವಾದ ಶಕ್ತಿಶಾಲಿ ನಾಯಕತ್ವದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಲಕ್ಷಾಂತರ ಮುಗ್ಧ ಜನರು ಸಾವನ್ನಪ್ಪುತ್ತಿದ್ದರು. ನಿಮ್ಮ ಧೈರ್ಯಶಾಲಿ ಕ್ರಮಗಳಿಂದ ನಿಮ್ಮ ಪರಂಪರೆ ಬಹಳವಾಗಿ ವೃದ್ಧಿಯಾಗಲಿದೆ.

ನಮ್ಮ ಆಡಳಿತವು ಭಾರತ ಹಾಗೂ ಪಾಕಿಸ್ತಾನ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಸುಂಕಗಳನ್ನು ವಿಧಿಸುತ್ತಲೇ ಇದ್ದರೂ ಎರಡೂ ದೇಶಗಳೊಂದಿಗೆ ವ್ಯಾಪಾರವನ್ನು ಗಣನೀಯವಾಗಿ ಹೆಚ್ಚಿಸುವುದಾಗಿ ಹೇಳಿದ್ದಾರೆ.

Tags:
error: Content is protected !!