Mysore
27
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಇಬ್ಬರು ವಿದೇಶಿಗರ ಬಂಧನ: ಕಾರಣ ಇಷ್ಟೇ

ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರುಘಟ್ಟ ಪೊಲೀಸರು, ಡೇವಿಡ್‌(35) ಹಾಗೂ ಕೋಫಿ(34) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1 ಕೋಟಿ ಮೌಲ್ಯದ 1 ಕೆ.ಜಿ. 520 ಗ್ರಾಂ ಎಂಡಿಎಂಎ ಅನ್ನು ವಶಕ್ಕೆ ಪಡೆದಿದ್ದಾರೆ.
ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳು ಶೈಕ್ಷಣಿಕ ವಿಸಾ ಮೇಲೆ ಭಾರತಕ್ಕೆ ಬಂದಿದ್ದರು. ಆದರೆ ಇಲ್ಲಿಗೆ ಬಂದಮೇಲೆ ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!