ನಂಜನಗೂಡು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್ ಪೈಪುಗಳು, ಡ್ರಮ್‌ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ.
ಇದನ್ನೂ ಓದಿ:- ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ವಿದಾಯ
ಘಟನೆ ನಡೆಯುತ್ತಿದ್ದಂತೆ ಸೆಸ್ಕಾಂ ವಿರುದ್ಧ ರೈತರು ಗಂಭೀರ ಆರೋಪ ಮಾಡಿದ್ದು, ಜಮೀನಿನಲ್ಲಿ ವಿದ್ಯುತ್ ಕಂಬಗಳು ಹಾದು ಹೋಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತುಕೊಂಡಿವೆ. ಶಾರ್ಟ್ ಸರ್ಕ್ಯೂಟ್‌ಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಈ ಘಟನೆ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.





