Mysore
13
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಟೀಸರ್ ಬಂದು 3 ವರ್ಷಗಳ ನಂತರ ʼಕಟ್ಲೆʼ ಚಿತ್ರದ ಮೊದಲ ಹಾಡು ಬಿಡುಗಡೆ

ಕನ್ನಡ ಸಿನಿಮಾಗಳಲ್ಲಿ ಕಾಮಿಡಿ ಮಾಡಿಕೊಂಡಿದ್ದ ನಟ ಕೆಂಪೇಗೌಡ ಹೀರೋ ಆಗುತ್ತಿರುವ ವಿಷಯ ಹೊಸದೇನಲ್ಲ. ಕೆಲವು ವರ್ಷಗಳ ಹಿಂದೆ ಕೆಂಪೇಗೌಡ್ರು ಹೀರೋ ಆದ್ರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ ಸುಮಾರು ಮೂರು ವರ್ಷಗಳ ಹಿಂದೆ ಕೆಂಪೇಗೌಡ ಹೀರೋ ಆಗಿ ನಟಿಸಿದ ಮೊದಲ ಚಿತ್ರ ʼಕಟ್ಲೆʼ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ʼಆಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದರು. ಆ ನಂತರ ಚಿತ್ರದ ಸುದ್ದಿಯೇ ಇರಲಿಲ್ಲ. ಇದೀಗ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ.

ಹೌದು, ಮರೆತೇ ಹೋಗಿದ್ದ ʼಕಟ್ಲೆʼ ಚಿತ್ರ ಇದೀಗ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರತಂಡವು ಪ್ರಚಾರ ಶುರು ಮಾಡಿಕೊಂಡಿದ್ದು, ಮೊದಲ ಹಂತವಾಗಿ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.

ʼಕಟ್ಲೆʼ ಚಿತ್ರದ ಮೊದಲ ಹಾಡನ್ನು ನಟ ʼಡಾರ್ಲಿಂಗ್ʼ ಕೃಷ್ಣ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ʼಬಹದ್ದೂರ್ʼ ಚೇತನ್ ಕುಮಾರ್ ಬರೆದಿರುವ ʼಯಾರೋ ನಾ ಕಾಣೆ. ಚಂದಾಗೌಳೆ ಶಾಣೆ …ʼ ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.

ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ʼಶ್ರೀವಿದ ಅವರು ʼಕಟ್ಲೆʼ ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಸದ್ಯದಲ್ಲೇ ʼಕಟ್ಲೆʼ ಚಿತ್ರವನ್ನು ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆʼ ಎಂದರು.

ಭರತ್ ಗೌಡ ಮೂವೀಸ್ ಸಂಸ್ಥೆಯಡಿ ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ʼಕಟ್ಲೆʼ ಚಿತ್ರದಲ್ಲಿ ಕೆಂಪೇಗೌಡ, ಅಮೃತಾ, ಹರೀಶ್ ರಾಜ್, ಟೆನ್ನಿಸ್ ಕೃಷ್ಣ, ಕರಿಸುಬ್ಬು, ಎಂ.ಎಸ್. ಉಮೇಶ್, ನಿಸರ್ಗ ಅಪ್ಪಣ್ಣ ಮುಂತಾದವರು ನಟಿಸಿದ್ದಾರೆ.

Tags:
error: Content is protected !!