ಬೆಂಗಳೂರು: ನಗರ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ಸುಧಾರಣೆಗೆ ಸಲಹೆ ಕೊಡಲಿ ಎಂದು ಉದ್ಯಮಿ ಮೋಹನ್‌ದಾಸ್ ವಿರುದ್ಧ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಕುಟುಕಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಹೀಗೆ ಹೇಳಿಕೆ ನೀಡುತ್ತಿರುವ ಉದ್ಯಮಿ ಪೈ ಅವರ ಮನಸ್ಸಿನಲ್ಲಿ ಏನಿದೆಯೋ ಎಂಬುದು ತಿಳಿದಿಲ್ಲ. ಪೈ ಕೂಡ ಈ ನಗರದಿಂದಲೇ ಲಾಭ ಮಾಡಿಕೊಂಡವರು. ಈಗ ಹುಬ್ಬಳ್ಳಿಗಾಗಲಿ, ಮೈಸೂರಿಗಾಗಲಿ ಹೋಗುವುದಿಲ್ಲ ಎಂದು ಪೈ ವಿರುದ್ಧ ಹರಿಹಾಯ್ದಿದ್ದಾರೆ.
ಮೋದಿ ಸರ್ಕಾರ ಏನೇ ಮಾಡಿದರೂ ಸರಿ, ಸಿದ್ದರಾಮಯ್ಯ ಸರ್ಕಾರ ಮಾಡಿದ್ದೆಲ್ಲವೂ ತಪ್ಪು ಎನ್ನುವ ಮನಸ್ಥಿತಿಯಲ್ಲಿ ಈ ರೀತಿಯ ಹೇಳಿಕೆ ನೀಡುತ್ತಾರೆ. ಇಂತಹ ಹೇಳಿಕೆಗಳಂದ ಪೈ ದೊಡ್ಡ ಮನುಷ್ಯರಾಗುವುದಿಲ್ಲ ಎಂದು ಚಾಟಿ ಬೀಸಿದರು.
ಕರ್ನಾಟಕದ ಸಮಗ್ರ ಅಭಿವೃದ್ದಿ ನಮ್ಮ ಆದ್ಯತೆಯಾಗಿದೆ. ಯಾರೇ ಆಗಲಿ ಈ ವಿಚಾರವಾಗಿ ಸಲಹೆ ಕೊಡಬಹುದು. ಪೈ ಅವರು ನನ್ನನ್ನಾಗಲಿ, ಸಿಎಂ, ಡಿಸಿಎಂ ಅಥವಾ ಐಟಿ ಸಚಿವರನ್ನಾದರೂ ಕಾಣಬಹುದು ಎಂದರು.
ಈ ಹಿಂದೆ ಪೈ ಮಳೆಗಾಲದಲ್ಲಿ ಬೆಂಗಳೂರಿನ ಒಂದು ಕಡೆ ಪ್ರವಾಹ ಉಂಟಾದಾಗ ವಾಗ್ದಾಳಿ ಮಾಡಿದ್ದರು. ಆದರೆ, ಆಗ ಚೆನ್ನೈ ನಗರವೇ ಜಲಾವೃತವಾದರೂ ಜಾಣಮೌನ ವಹಿಸಿದ್ದರು. ಬಿಜೆಪಿ ನಮ್ಮ ಕಾರ್ಯಕ್ರಮಗಳನ್ನೇ ನಕಲು ಮಾಡುತ್ತಿದೆ ಇದನ್ನು ಕಂಡರೂ ಇವರೇಕೆ ಸುಮ್ಮನಿದ್ದಾರೆ ಎಂದು ಟಾಂಗ್ ಕೊಟ್ಟರು.
ತೆಲಂಗಾಣಕ್ಕೆ ನೀರು ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕುಡಿಯುವ ಉದ್ದೇಶಕ್ಕಾಗಿ ಆಲಮಟ್ಟಿ ಅಣೆಕಟ್ಟೆಯಿಂದ ತೆಲಂಗಾಣಕ್ಕೆ 1.24 ಟಿಎಂಸಿ ಅಡಿ ನೀರು ಬಿಟ್ಟಿದೆ. ಕೆಲವೊಂದು ವಿಚಾರಗಳನ್ನು ಮಾನವೀಯವಾಗಿ ನೋಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು…
ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…
ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…
ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…
ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…
ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…