ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ.
ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೋಬ್ಬರಿ 70 ಲಕ್ಷ ರೂ ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ಕೆಐಎಡಿಬಿ ನೋಟಿಸ್ ನೀಡಿತ್ತು.
ಈ ಬಗ್ಗೆ ಮಠದ ಸ್ವಾಮೀಜಿಗಳು ಪ್ರತಿಕ್ರಿಯೆ ನೀಡಿದ್ದು, ನಾವು ಹಣ ಪಾವತಿ ಮಾಡುವುದಿಲ್ಲ ಎಂದು ಉತ್ತರ ನೀಡಿದ್ದರು.
ತುಮಕೂರು ತಾಲ್ಲೂಕಿನ ಹೊನ್ನೇನಹಳ್ಳಿ ಕೆರೆಯಿಂದ ಕೆಐಎಡಿಬಿ ಪೈಪ್‌ಲೈನ್ ಮೂಲಕ ದೇವರಾಯನಪಟ್ಟಣಕ್ಕೆ ನೀರು ಹರಿಸಲಾಗಿತ್ತು. ಕೆರೆಯು ಸಿದ್ಧಗಂಆ ಮಠದ ಸನಿಹದಲ್ಲೇ ಇದೆ. 2023-24ನೇ ಸಾಲಿನಲ್ಲಿ ಮಠದ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನೀರು ನೀಡಲಾಗಿತ್ತು. ಸಿದ್ಧಗಂಗಾ ಮಠ ಈ ನೀರನ್ನು ದೈನಂದಿನ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದೆ. ಹೀಗಾಗಿ ಈ ನೀರಿಗೆ ಹಣ ಪಾವತಿಸುವಂತೆ ಕೆಐಎಡಿಬಿ ಸೂಚನೆ ನೀಡಿತ್ತು.
ಈ ಬಗ್ಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ನೋಟಿಸ್ ಹಿಂಪಡೆದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್ ಅವರು, ಇದು ಏಪ್ರಿಲ್‌ನಲ್ಲಿ ಕೊಟ್ಟ ನೋಟಿಸ್ ಆಗಿದೆ. ಆ ಕೆರೆಯಿಂದ ನೀರು ಬಳಸಿರುವುದು ತಪ್ಪಲ್ಲ. ನೀರೇ ಬಳಸದೇ ನೋಟಿಸ್ ಕೊಟ್ಟಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದು, ಸ್ವಾಮೀಜಿ ಜೊತೆಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.