ಯಳಂದೂರು: ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವವು ಇಂದು ಮಧ್ಯಾಹ್ನ 2 ಗಂಟೆಯ ಸಮಯದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಜರುಗಿತು. ನಿತ್ಯರಾಧನೆ ಕಲ್ಯಾಣೋತ್ಸವ, ಪ್ರಸ್ಥಾನ ಮಂಟಪೋತ್ಸವ ನಡೆದ ಬಳಿಕ ರಥಾರೋಹಣ ನೆರವೇರಿದ ಬಳಿಕ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು.
ಇದನ್ನೂ ಓದಿ:- ಮುಂಗಾರು ಚೇತರಿಕೆ ; ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ
ಚಾಮರಾಜನಗರ ಜಿಲ್ಲೆ ಸೇರಿದಂತೆ ರಾಜ್ಯದ ನಾನಾಭಾಗಗಳಿಂದ ಸಹಸ್ರಾರು ಮಂದಿ ಸಾರ್ವಜನಿಕರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥ ಎಳೆಯುವಾಗ ಕೂಗಿದ ಜಯಘೋಷಗಳು ಬೆಟ್ಟದಲ್ಲಿ ಮಾರ್ದನಿಸಿತು.





