Categories: Uncategorized

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದಾಗಿ ನಿಗದಿಯಾಗಿದ್ದ ಮದುವೆ ಕಾರ್ಯಕ್ರಮ ಸ್ಥಗಿತಗೊಂಡಿದೆ.

ಕುಣಗಳ್ಳಿ ಗ್ರಾಮದ ನಿವಾಸಿ ಎಲ್. ರವೀಶ್ (34) ಅವರು ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್‌ನಲ್ಲಿ ಜ.30ರಂದು (ಇಂದು) ನಡೆಯಬೇಕಿದ್ದ ಆರತಕ್ಷತೆಗೆ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎಂಜಿಎಸ್‌ವಿ ಕಾಲೇಜು ರಸ್ತೆ ಬಳಿ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ, “ನೀನು ಮದ್ವೆ ಮನೆಗಲ್ಲ, ಸ್ಮಶಾನಕ್ಕೆ ತೆರಳಬೇಕು” ಎಂದು ಬೆದರಿಕೆ ಹಾಕಿ ಚಾಕು ಮತ್ತು ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಲ್ಲಿ ರವೀಶ್ ಅವರ ಎಡಗೈ ತೋಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ತಪ್ಪಿದ್ದು, ಸದ್ಯ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪ್ರೇಮ ಸಂಬಂಧದ ಶಂಕೆ
6 ತಿಂಗಳ ಹಿಂದೆಯಷ್ಟೇ ರವೀಶ್ ಅವರಿಗೆ ಹೊಸ ಅಣಗಳ್ಳಿ ಗ್ರಾಮದ ನಯನ ಎಂಬ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ವಧುವಿನ ಮಾಜಿ ಪ್ರೇಮಿ ಅಥವಾ ಸಂಬಂಧಿಕರೇ ಈ ದಾಳಿಗೆ ಕಾರಣರಾಗಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ. ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

13 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

13 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

13 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

13 hours ago