lakshmi hebbalkar opinion on caste census
ಬೆಳಗಾವಿ: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಸ್ವತಃ ಬಲದ ಮೇಲೆ ಅಧಿಕಾರಕ್ಕೇರಲು ಸಾಧ್ಯವಾಗದ ಬಿಜೆಪಿ ನಾಯಕರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನ ಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಲು ಆಗದ ರಾಜ್ಯ ಬಿಜೆಪಿ ನಾಯಕರು, ಜನಪರವಾಗಿರುವ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಕಿಡಿಕಾರಿದರು.
ಇದುವರೆಗೂ 80 ಸಾವಿರ ಕೋಟಿ ಹಣ ಜನರ ಜೇಬಿಗೆ
ಮುಂದಿನ ತಿಂಗಳು 20 ನೇ ತಾರೀಖಿಗೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಸಚಿವರು ಹೇಳಿದರು.
2023 ರಲ್ಲಿ ಜನರ ವಿಶ್ವಾಸ ಗಳಿಸಿ ಕರ್ನಾಟದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿದ್ದೇವೆ. ಸರ್ಕಾರ ಬಂದು 100 ದಿನಗಳ ಒಳಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಮನೆ ಬಾಗಿಲಿಗೆ ತಂದಿದ್ದೇವೆ. 136 ಸ್ಥಾನ ಗೆದ್ದರೂ ರಾಜ್ಯ ಸರ್ಕಾರ ಉಳಿಯುವುದಿಲ್ಲ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಬರಲು ಸಾಧ್ಯವಿಲ್ಲ ಅಂತ ಬಿಜೆಪಿಗರು ಹೇಳುತ್ತಿದ್ದರು. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಕರ್ನಾಟಕದ ಇತಿಹಾಸದಲ್ಲೇ ಎಂದೂ ಕಾಣದಂತಹ ಹಲವಾರು ಯೋಜನೆಗಳ ಮೂಲಕ, ಅಭಿವೃದ್ಧಿಯ ಮೂಲಕ ನಮ್ಮ ಸರಕಾರ ಇಂದು ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸುಮಾರು 4-5 ಸಾವಿರ ರೂಪಾಯಿ ಲಾಭ ಮಾಡಿಕೊಡಲಾಗುತ್ತಿದೆ. ತನ್ಮೂಲಕ ಕುಟುಂಬಗಳ ಆರ್ಥಿಕ ಶಕ್ತಿಯನ್ನು, ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಪೆಟ್ರೋಲ್ ಬೆಲೆ 63.77 ರೂಪಾಯಿ ಇತ್ತು, ಇಂದು 102 ರೂಪಾಯಿ ಆಗಿದೆ. ಗ್ಯಾಸ್ ಸಿಲೆಂಡರ್ ದರ 410 ರೂಪಾಯಿ ಇತ್ತು, ಈಗ 855.50 ರೂಪಾಯಿ ಆಗಿದೆ. ಅಲ್ಲದೆ, ಸಿಮೆಂಟ್, ರಸ ಗೊಬ್ಬರದ ಬೆಲೆ ದುಬಾರಿಯಾದೆ. ಇದು ಕೇಂದ್ರ ಸರ್ಕಾರದ ಜನರಿಗೆ ಕೊಟ್ಟಿರುವ ಉಡುಗೊರೆ ಎಂದು ಕಿಡಿಕಾರಿದರು.
ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಗಳಾದ ರಣದೀಪ್ ಸುರ್ಜೆವಾಲಾ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಿಯಾಂಕ ಜಾರಕಿಹೊಳಿ ಸೇರಿದಂತೆ ವೇದಿಕೆಯಲ್ಲಿ ರಾಜ್ಯಸಭೆಯ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಶಾಸಕರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…