Categories: Uncategorized

ವಾರದೊಳಗೆ ಗೃಹಲಕ್ಷ್ಮೀ ಹಣ ಬಿಡುಗಡೆ ; ಸಚಿವೆ ಹೆಬ್ಬಾಳಕರ್‌

ಬೆಳಗಾವಿ: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಸ್ವತಃ ಬಲದ ಮೇಲೆ ಅಧಿಕಾರಕ್ಕೇರಲು ಸಾಧ್ಯವಾಗದ ಬಿಜೆಪಿ ನಾಯಕರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನ ಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಲು ಆಗದ ರಾಜ್ಯ ಬಿಜೆಪಿ ನಾಯಕರು, ಜನಪರವಾಗಿರುವ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಕಿಡಿಕಾರಿದರು.

ಇದುವರೆಗೂ 80 ಸಾವಿರ ಕೋಟಿ ಹಣ ಜನರ ಜೇಬಿಗೆ
ಮುಂದಿನ ತಿಂಗಳು 20 ನೇ ತಾರೀಖಿಗೆ ನಮ್ಮ ಸರ್ಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿದೆ. ಈವರೆಗೆ 80 ಸಾವಿರ ಕೋಟಿ ರೂಪಾಯಿಗಳಷ್ಟು ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ಜನರ ಜೇಬಿಗೆ ಹಾಕಿದ್ದೇವೆ. ಇದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ ಸಾಮಾನ್ಯರ ಮೇಲಿರುವ ಬದ್ಧತೆ ಎಂದು ಸಚಿವರು ಹೇಳಿದರು.

2023 ರಲ್ಲಿ ಜನರ ವಿಶ್ವಾಸ ಗಳಿಸಿ ಕರ್ನಾಟದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿದ್ದೇವೆ. ಸರ್ಕಾರ ಬಂದು 100 ದಿನಗಳ ಒಳಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನು ಮನೆ ಬಾಗಿಲಿಗೆ ತಂದಿದ್ದೇವೆ. 136 ಸ್ಥಾನ ಗೆದ್ದರೂ ರಾಜ್ಯ ಸರ್ಕಾರ ಉಳಿಯುವುದಿಲ್ಲ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಬರಲು ಸಾಧ್ಯವಿಲ್ಲ ಅಂತ ಬಿಜೆಪಿಗರು ಹೇಳುತ್ತಿದ್ದರು. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕರ್ನಾಟಕದ ಇತಿಹಾಸದಲ್ಲೇ ಎಂದೂ ಕಾಣದಂತಹ ಹಲವಾರು ಯೋಜನೆಗಳ ಮೂಲಕ, ಅಭಿವೃದ್ಧಿಯ ಮೂಲಕ ನಮ್ಮ ಸರಕಾರ ಇಂದು ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸುಮಾರು 4-5 ಸಾವಿರ ರೂಪಾಯಿ ಲಾಭ ಮಾಡಿಕೊಡಲಾಗುತ್ತಿದೆ. ತನ್ಮೂಲಕ ಕುಟುಂಬಗಳ ಆರ್ಥಿಕ ಶಕ್ತಿಯನ್ನು, ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಪೆಟ್ರೋಲ್ ಬೆಲೆ 63.77 ರೂಪಾಯಿ ಇತ್ತು, ಇಂದು 102 ರೂಪಾಯಿ ಆಗಿದೆ. ಗ್ಯಾಸ್ ಸಿಲೆಂಡರ್ ದರ 410 ರೂಪಾಯಿ ಇತ್ತು, ಈಗ 855.50 ರೂಪಾಯಿ ಆಗಿದೆ. ಅಲ್ಲದೆ, ಸಿಮೆಂಟ್, ರಸ ಗೊಬ್ಬರದ ಬೆಲೆ ದುಬಾರಿಯಾದೆ. ಇದು ಕೇಂದ್ರ ಸರ್ಕಾರದ ಜನರಿಗೆ ಕೊಟ್ಟಿರುವ ಉಡುಗೊರೆ ಎಂದು ಕಿಡಿಕಾರಿದರು.

ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಗಳಾದ ರಣದೀಪ್ ಸುರ್ಜೆವಾಲಾ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಿಯಾಂಕ ಜಾರಕಿಹೊಳಿ ಸೇರಿದಂತೆ ವೇದಿಕೆಯಲ್ಲಿ ರಾಜ್ಯಸಭೆಯ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಶಾಸಕರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

55 mins ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

4 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

5 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

5 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

5 hours ago