ಉತ್ತರಾಖಂಡ್: ಭಾನುವಾರ ಮುಂಜಾನೆ ಕೇದಾರನಾಥದ ಬಳಿ ಭಾರೀ ಹಿಮ ಕುಸಿತ ಸಂಭವಿಸಿದ್ದು, ಈ ಅವಘಡದಿಂದ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯವು ಸಂಪೂರ್ಣ ಸುರಕ್ಷಿತವಾಗಿದೆ.
ಉತ್ತರಾಖಂಡ್‌ದಲ್ಲಿ ಚಾರ್ ಧಾಮ್ ಯಾತ್ರೆ ಆರಂಭವಾದಾಗಿನಿಂದಲೂ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಕೇದಾರನಾಥಕ್ಕೆ ಆಗಮಿಸುತ್ತಿದ್ದಾರೆ. ಇದೀಗ ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತ ಸಂಭವಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಗಾಂಧಿ ಸರೋವರ ಬೆಟ್ಟಗಳಿಂದ ಭಾರೀ ಮಳೆ ಸುರಿದಿದ್ದು, ಮುಂಜಾನೆ 5 ಗಂಟೆ ಸುಮಾರಿಗೆ ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ ಸಂಭವಿಸಿದೆ. ಇದರಿಂದ ಯಾವುದೇ ಪ್ರಾಣ ಹಾನಿ, ಆಸ್ತಿ-ಪಾಸ್ತಿ ಹಾನಿಯಾಗಿಲ್ಲ ಎಂದು ವರದಿಯಾಗಿದೆ.
ಕೇದಾರನಾಥ ದೇವಸ್ಥಾನದ ಹಿಂಭಾಗದಲ್ಲಿ ಹಿಮಪಾತದಲ್ಲಿ ಬಿದ್ದ ಹಿಮವು ಹೆಚ್ಚಿನ ವೇಗದಲ್ಲಿ ಧಾವಿಸಿ ದೇವಸ್ಥಾನದ ಹಿಂದೆ ಇರುವ ಗಾಂಧಿ ಸರೋವರಕ್ಕೆ ಬಂದು ಬಿದ್ದಿದೆ. ಈ ಅವಘಡದಿಂದಾಗಿ ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ. ದೇವಾಲಯ ಸಂಪೂರ್ಣ ಸುರಕ್ಷಿತವಾಗಿದೆ ಎಂದು ತಿಳಿದು ಬಂದಿದೆ.