Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನವೆಂಬರ್.‌28ರಂದು ಜಾರ್ಖಂಡ್‌ ಸಿಎಂ ಆಗಿ 4ನೇ ಬಾರಿಗೆ ಹೇಮಂತ್‌ ಸೋರೆನ್‌ ಪ್ರಮಾಣವಚನ

ರಾಂಚಿ: ಜೆಎಂಎಂ ನಾಯಕ ಹೇಮಂತ್‌ ಸೊರೆನ್‌ ಅವರು ನವೆಂಬರ್.‌28ರಂದು ನಾಲ್ಕನೇ ಬಾರಿಗೆ ಜಾರ್ಖಂಡ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಇಂಡಿಯಾ ಬ್ಲಾಕ್‌ನ ಹಲವಾರು ವಿರೋಧ ಪಕ್ಷದ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.

81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಎಂಎಂ ನೇತೃತ್ವದ ಒಕ್ಕೂಟವು ಜಾರ್ಖಂಡ್‌ನಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.

ಜೆಎಂಎಂ 34 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಮೈತ್ರಿಕೂಟದ ಪಾಲುದಾರರಾದ ಕಾಂಗ್ರೆಸ್‌ ಮತ್ತು ಆರ್‌ಜೆಡಿ ಕ್ರಮವಾಗಿ 16 ಮತ್ತು 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಸಿಪಿಐ ಲಿಬರೇಷನ್‌ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಎನ್‌ಡಿಎ ಕೇವಲ 24 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

ನವೆಂಬರ್.‌28ರಂದು ನಡೆಯುವ ಪ್ರಮಾಣವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಅಖಿಲೇಶ್‌ ಯಾದವ್‌, ಅರವಿಂದ್‌ ಕೇಜ್ರಿವಾಲ್‌, ತೇಜಸ್ವಿ ಯಾದವ್‌ ಸೇರಿದಂತೆ ಪ್ರಮುಖ ನಾಯಕರು ಪಾಲ್ಗೊಳ್ಳುವ ಸಾಧ್ಯತೆಯಿದೆ.

Tags: