ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ.ರೂಪಾ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ನ್ಯಾಯಮೂರ್ತಿ ಮೊಹಮದ್ ನವಾಜ್‌ರವರಿದ್ದ ಪೀಠ ಮಾ.12ರವರೆಗೆ ವಿಚಾರಣೆಗೆ ತಡೆಯಾಜ್ಞೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದ್ದಾರೆ.
2023ರ ಫೆ.19ರಂದು ರೋಹಿಣಿ ಸಿಂಧೂರಿ ಮಾಧ್ಯಮಗಳ ಮೂಲಕ ತಮ್ಮ ವಿರುದ್ಧ ಅವಹೇಳನಕಾರಿ ಹೆಳೀಕೆಗಳನ್ನು ನೀಡಿದ್ದಾರೆ. ಈ ಹೇಳಿಕೆಯಿಂದ ನಮ್ಮ ಕುಟುಂಬದವರು ಮಾನಸಿಕ ಹಿಂಸೆ ಅನುಭವಿಸಿದ್ದಾರೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು