Mysore
15
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಮುಂದಿನ ಚುನಾವಣೆಯಲ್ಲಿ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ: ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ

ಬೆಳಗಾವಿ: 2028ರ ಚುನಾವಣೆಯಲ್ಲಿ ನಾನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಅಭ್ಯರ್ತಿಗಳು ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಂತಸ ವ್ಯಕ್ತಪಡಿಸಿದರ ಅವರು, ಈ ಚುನಾವಣೆಯು ಇತರರನ್ನು ಆಯ್ಕೆ ಮಾಡುವ ನಾಯಕನಾಗಿ ನನ್ನನ್ನು ಬಲಪಡಿಸಿದೆ. ಬಿಜೆಪಿ ಹಿಡಿತದಲ್ಲಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ನಾವೇ ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಈಗ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಸಚಿವ ಸಂಪುಟದಲ್ಲಿ ಖಾತೆ ಬದಲಾವಣೆ ಬಗ್ಗೆಯೂ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಮಹಾರಾಷ್ಟ್ರದಲ್ಲಿ ಮಹಾವಿಕಾಸ ಆಘಾಡಿ ಸೋತಿರುವ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನಮ್ಮ ಸೋಲಿಗೆ ಇವಿಎಂಗಳೇ ಕಾರಣ. ಇವಿಎಂಗಳ ಬಗ್ಗೆ ಬಹಳಷ್ಟು ಅನುಮಾನವಿದೆ. ಎಲ್ಲಿಯವರೆಗೆ ಇವಿಎಂಗಳು ಇರುತ್ತವೆಯೋ ಅಲ್ಲಿಯವರೆಗೆ ದೇಶದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ ಎಂದು ಕಿಡಿಕಾರಿದರು.

Tags:
error: Content is protected !!