Mysore
19
broken clouds

Social Media

ಶುಕ್ರವಾರ, 27 ಡಿಸೆಂಬರ್ 2024
Light
Dark

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌: ಅಗ್ರಸ್ಥಾನಕ್ಕೆ ಬುಮ್ರಾ, ಜೈಸ್ವಾಲ್‌ 2ನೇ ಸ್ಥಾನ

ದುಬೈ: ಇತ್ತೀಚೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ(ಐಸಿಸಿ) ಬಿಡುಗಡೆ ಮಾಡಿರುವ ರ‍್ಯಾಂಕಿಂಗ್ ಗಳ ಪಟ್ಟಿಯಲ್ಲಿ ಇಂಡಿಯಾದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಅಗ್ರಸ್ಥಾನಕ್ಕೇರಿದ್ದು, ಜೈಸ್ವಾಲ್‌‌ ಟೆಸ್ಟ್ ವೃತಿಜೀವನದಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಅತ್ಯುತ್ತಮ ಬೌಲಿಂಗ್‌ ದಾಳಿ ನಡೆಸಿದ ಬುಮ್ರಾ ಒಟ್ಟು 8 ವಿಕೆಟ್‌ ಕಬಳಿಸಿದರು. ಪರ್ತ್‌ ಟೆಸ್ಟ್‌ನ ಉತ್ತಮ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ ಕಗಿಸೊ ರಬಾಡ ಹಾಗೂ ಆಸ್ಟ್ರೇಲಿಯಾದ ಜೋಶ್‌ ಹ್ಯಾಜಲ್‌ವುಡ್‌ ಅವರನ್ನು ಹಿಂದಿಕ್ಕುವ ಮೂಲಕ ವೃತ್ತಿಜೀವನದಲ್ಲೇ ಗರಿಷ್ಠ ರೇಟಿಂಗ್‌ ಪಾಯಿಂಟ್(‌883) ಗಳಿಸಿದ್ದಾರೆ.

ಅಗ್ರ 10 ರಲ್ಲಿ ರವಿಚಂದ್ರನ್‌ ಅಶ್ವಿನ್‌ ನಾಲ್ಕನೇ ಸ್ಥಾನದಲ್ಲಿದ್ದರೆ, ಮಹಮ್ಮದ್‌ ಸಿರಾಜ್‌ 25ನೇ ಸ್ಥಾನಗಳಿಸಿದ್ದಾರೆ.

ಬೆಸ್ಟ್‌ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಯುವ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ಎರಡನೇ ಸ್ಥಾನಕ್ಕೆ ತಲುಪಿದ್ದಾರೆ. ಇಂಗ್ಲೆಂಡ್‌ನ ಬ್ಯಾಟರ್‌ ಜೋ ರೂಟ್‌(903) ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಟೆಸ್ಟ್‌ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ (423) ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ರವಿಚಂದ್ರನ್‌ ಅಶ್ವಿನ್ (‌290) ಅಂಕಗಳೊಂದಿಗೆ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.

Tags: