ಲಖನೌ: ಬಿರುಸಿನ ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್ 69(34) ಅವರ ಅರ್ಧಶತಕದ ನೆರವಿನಿಂದ ಐಪಿಎಲ್ 18ನೇ ಆವೃತ್ತಿಯ ಲಖನೌ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 8 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.
ಏಕನಾ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅತೀಥೆಯ ಲಖನೌ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು.
ಅದರಂತೆ ಬ್ಯಾಟಿಂಗ್ ಆರಂಭಿಸಿದ ಲಖನೌ ತಂಡ, ನಿಕೋಲಸ್ ಪೂರನ್ 44(30) ಹಾಗೂ ಆಯುಷ್ ಬಡೋನಿ 41(33) ಅವರ ಸಮಯೋಚಿತ ಆಟ ಹಾಗೂ ಕೊನೆಯಲ್ಲಿ ಅಬ್ದುಲ್ ಸಮದ್ 27(12) ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್‌ಗಳ ಗುರಿ ನೀಡಿತು.
ಪಂಜಾಬ್ ತಂಡದ ಪರ ವೇಗಿ ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆದರೆ, ಲಾಕಿ ಫರ್ಗ್ಯೂಸನ್, ಮ್ಯಾಕ್ಸವೆಲ್ ಮಾರ್ಕೊ ಯಾನ್ಸನ್ ಮತ್ತು ಯುಜುವೇಂದ್ರ ಚಹಾಲ್ ಅವರು ತಲಾ ಒಂದು ವಿಕೆಟ್ ಪಡೆದರು.
ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಪಂಜಾಬ್ 16.1 ಓವರ್‌ಗಳಲ್ಲಿ 2 ವಿಕೆ ಟ್ ಕಳೆದುಕೊಂಡು 177 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು.
ಆರಂಭಿಕ ಬ್ಯಾಟರ್ ಪ್ರಭಮನ್ ಸಿಂಗ್ 69(34) ಭರ್ಜರಿ ಬ್ಯಾಟಿಂಗ್ ನಡೆಸಿ ಪಂಜಾಬ್ ಗೆಲುವಿಗೆ ಮುನ್ನುಡಿ ಬರೆದರು. ಅವರ ವಿಕೆಟ್ ನಂತರ ನಾಯಕ ಶ್ರೇಯಸ್ ಅಯ್ಯರ್ 52(30) ಹಾಗೂ ನೇಹಾಲ್ ವಡೇರಾ 43(25) ಜೊತೆಗೂಡಿ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.