ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್.11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಜೊತೆ ಪೊಲೀಸರು ತೀವ್ರ ಶೋಧ ಮತ್ತು ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದೆ.
ಜೂನ್.11ರಂದು ಚತ್ತರಗಲ್ಲದ ಚೆಕ್‌ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಆರು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮರುದಿನ ಗಂಡೋ ಪ್ರದೇಶದ ಕೋಟಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಈ ಅವಳಿ ದಾಳಿಯ ನಂತರದಲ್ಲಿ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದವು. ಗಡಿ ನುಸುಳಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ತಲೆಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು.
ಇಂದು ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದರು. ಆದರೆ ಮಣ್ಣಿನ ಮನೆಯಲ್ಲಿ ಅಡಗಿದ್ದ ಭಯೋತ್ಪಾದಕರು ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.
ಈ ಮಧ್ಯೆ ರಜೌರಿ ಜಿಲ್ಲೆಯ ಚಿಂಗಸ್ ಪ್ರದೇಶದ ಪಿಂಡ್ ಎಂಬ ಹಳ್ಳಿಯಲ್ಲಿ ಚೀನಾ ನಿರ್ಮಿತ ಕೈ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…