Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಿದ್ದರಾಮಯ್ಯ ಯಾವತ್ತೂ ನನ್ನನ್ನು ಕಾಂಗ್ರೆಸ್‌ಗೆ ಆಹ್ವಾನಿಸಿಲ್ಲ: ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಯಾವತ್ತೂ ನನ್ನನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿಲ್ಲ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ದಸರಾದಲ್ಲಿ ಸಿಎಂ ಸಿದ್ದರಾಮಯ್ಯರ ಜೊತೆ ವೇದಿಕೆ ಹಂಚಿಕೊಂಡಿದ್ದು ಬಿಟ್ಟರೆ ಮತ್ತೆ ಅವರನ್ನು ಭೇಟಿ ಮಾಡಿಲ್ಲ. ಅವರು ನನ್ನನ್ನು ಪಕ್ಷಕ್ಕೆ ಬಾ ಎಂದು ಆಹ್ವಾನಿಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಯಾವುದೋ ಒಂದು ಸಭೆಯಲ್ಲಿ ಹೇಳಿರಬಹುದು. ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಸಾರ್ವತ್ರಿಕ ಚುನಾವಣೆಗೂ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯ ಆಪ್ತ ಕಾರ್ಯದರ್ಶಿ ಪಕ್ಷಕ್ಕೆ ಬರುವಂತೆ ಆಹ್ವಾನಿಸಿದ್ದರು. ಆಗಲೇ ನಾನು ಕಾಂಗ್ರೆಸ್‌ ಪಕ್ಷಕ್ಕೆ ಹೋಗಿಲ್ಲ ಎಂದರು.

ಇನ್ನು ಶಾಸಕ ಜಿ.ಟಿ.ದೇವೇಗೌಡರು ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಮಾತನಾಡಿದ್ದರು. ಇದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಜಿಟಿಡಿಯನ್ನು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರವಿಡಲಾಗಿತ್ತು. ಇದು ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಬಳಿಕ ಜಿ.ಟಿ.ದೇವೇಗೌಡ ಕಾಂಗ್ರೆಸ್‌ ಸೇರುತ್ತಾರೆ ಎನ್ನಲಾಗಿತ್ತು.

ಈ ಬಗ್ಗೆ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ ನೀಡಿದ್ದು, ಸಿಎಂ ಸಿದ್ದರಾಮಯ್ಯರಿಂದ ನನಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಹೇಳಿದ್ದಾರೆ.

Tags: