ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ದೂರದರ್ಶನ ಚಂದನವು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ‘ಮಧುರ ಮಧುರವೀ ಮಂಜುಳಗಾನ” – “ನಾವಾಡುವ ನುಡಿಯ ಕನ್ನಡ ನುಡಿ” ಶೀರ್ಷಿಕೆಯಡಿ, ಕನ್ನಡ ನಾಡು-ನುಡಿಯ ಕುರಿತಾದ ಚಲನಚಿತ್ರ ಗೀತೆಗಳು ಹಾಗು ಕವಿಗಳ ಗೀತ ರಚನೆಗಳನ್ನೊಳಗೊಂಡ “ಕನ್ನಡ-ಕನ್ನಡಿಗ-ಕರ್ನಾಟಕ” ಕಾರ್ಯಕ್ರಮವನ್ನು ಡಿಸೆಂಬರ್ 1 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಗೀತ ನೃತ್ಯ ಹಬ್ಬದಲ್ಲಿ ಭಾಗವಹಿಸಲು ಇಚ್ಛಿಸುವವರು ನವೆಂಬರ್ 24 ರಂದು ಬೆಳಿಗ್ಗೆ 9 ಗಂಟೆಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಮತ್ತು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9900265919/ 9901729802 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





