Mysore
20
overcast clouds
Light
Dark

ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಕರವೇ ಬೃಹತ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕರವೇ ಕಾರ್ತಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಸೇರಿದ ಸಾವಿರಾರು ಕಾರ್ಯಕರ್ತರು, ಕನ್ನಡ ನಾಡಿನಲ್ಲಿ ಕೇಂದ್ರ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಇತರ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ಬರುವವರ ಸಂಖ್ಯೆ ಹೆಚ್ಚಾಗಿದೆ. ಖಾಸಗಿ ವಲಯದಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ತುಂಬಾ ಅನ್ಯಾಯವಾಗುತ್ತಿದೆ. ಆದ್ದರಿಂದ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಪ್ರತಿಭಟನಾಕಾರನನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.