Mysore
26
haze

Social Media

ಗುರುವಾರ, 01 ಜನವರಿ 2026
Light
Dark

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ; ನಾಳೆ ಕರೆ ನೀಡಿದ್ದ ಮದ್ಯ ಮಾರಾಟ ಬಂದ್‌ ವಾಪಸ್‌

ಬೆಂಗಳೂರು: ರಾಜ್ಯಾದ್ಯಾಂತ ನಾಳೆ (ನ.20) ಮದ್ಯ ಮಾರಾಟ ಬಂದ್‌ ಮಾಡುವಂತೆ ಕರೆ ನೀಡಿದ್ದ ಘೋಷಣೆಯನ್ನು ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಇಂದು ವಾಪಾಸ್‌ ಪಡೆಯಲಾಗಿದೆ.

ರಾಜ್ಯ ಸರ್ಕಾರದ ಮುಂದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ವೈನ್ಸ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ರಾಜ್ಯಾಧ್ಯಕ್ಷ ಕರುಣಾಕರ ಹೆಗಡೆ ಇಂದು(ನ.19) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಂಧಾನ ಮಾಡಿಕೊಂಡಿದ್ದಾರೆ. ಹೀಗಾಗಿ ನಾಳೆ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದನ್ನು ಹಿಂಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಾರ್‌ ಅಸೋಸಿಯೇಷನ್‌ನ ವಿವಿಧ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹಾಗಾಗಿ ಮದ್ಯ ಮಾರಾಟ ಬಂದ್‌ ಅನ್ನು ವಾಪಾಸ್‌ ಪಡೆಯಲಾಗುತ್ತಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದ ರಾಜ್‌ ತಿಳಿಸಿದ್ದಾರೆ.

ರಾಜ್ಯಾದ್ಯಾಂತ ಮದ್ಯ ಮಾರಾಟ ಬಂದ್‌ಗೆ ಕರೆ ಯಾಕೆ?
ರಾಜ್ಯ ಸರ್ಕಾರದ ಮುಂದೆ ಬಾರ್‌ ಅಸೋಸಿಯೇಷನ್‌ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಅದನ್ನು ಕಡಿಮೆ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು. ಇಲ್ಲವಾದರೆ ನವೆಂಬರ್‌ 20ರಂದು ರಾಜ್ಯಾದ್ಯಾಂತ ಬಾರ್‌ಗಳಲ್ಲಿ ಮದ್ಯ ಮಾರಾಟ ಮಾಡದೇ ಬಂದ್‌ ಮಾಡಲಾಗುವುದು ಎಂದು ಆಗ್ರಹಿಸಿದ್ದರು.

Tags:
error: Content is protected !!