ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಗುರುವಾರ) ಜನ ಸಂಪರ್ಕ ಸಭೆ ನೆಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು.
ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಸಾರ್ವಜನಿಕರ ಆಹವಾಲುಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದರು. ಇನ್ನೂ ಕೆಲವು ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ನಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಎರಡನೇ ಜನ ಸ್ಪಂದನಾ ಕಾರ್ಯಕಮ ಆಯೋಜಿಸಿರುವ ಬೆನ್ನಲ್ಲೇ ಶಾಸಕ ಎ.ಆರ್ ಕೃಷ್ಣಮೂರ್ತಿ ಅವರು ಜನ ಸಂಪರ್ಕ ಸಭೆ ನಡೆಸಿದ್ದು, ವಿಲೇವಾರಿ ಅಗಿರುವ ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.




