ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮಾರ್ಚ್ 3 ರಂದು ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ.
ಈಗಾಗಗಲೇ ಬಜೆಟ್ ಮಂಡನೆ ವಿಚಾರವಾಗಿ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಅವರು ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದು, ರಾಜ್ಯಾದ್ಯಾಂತ ಈ ನಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಬಜೆಟ್ ಹಿನ್ನಲೆ ಸಿಎಂ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.