Uncategorized

ಗಣೇಶೋತ್ಸವದ ನಿರ್ಬಂಧ ತೆರವುಗೊಳಿಸಿ : ಸರ್ಕಾರಕ್ಕೆ ಪ್ರತಿಪಕ್ಷಗಳ ಆಗ್ರಹ

ಬೆಂಗಳೂರು : ಗಣೇಶೋತ್ಸವಕ್ಕೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು.

ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿಯ ಸುನಿಲ್ ವಲ್ಯಾಪುರ್ ಅವರು ವಿಷಯ ಪ್ರಸ್ತಾಪಿಸಿ ಗಣೇಶ ಉತ್ಸವಕ್ಕೆ ಕಲಬುರಗಿ ಜಿಲ್ಲಾಡಳಿತ ನಿರ್ಬಂಧ ಹಾಕಿದೆ. ಅನ್ಯಧರ್ಮಗಳ ಆಚರಣೆಗೆ ಇಲ್ಲದ ನಿರ್ಬಂಧ ನಮ್ಮ ಆಚರಣೆಗೆ ಏಕೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಎನ್.ರವಿಕುಮಾರ್, ಶಶಿಲ್ ನಮೋಶಿ, ಭಾರತಿ ಶೆಟ್ಟಿ ಮತ್ತಿತರ ಸದಸ್ಯರು, ಇದು ಕೇವಲ ಕಲಬುರಗಿಯಲ್ಲಿ ಮಾತ್ರ ಇಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ ಎಂದು ಕಿಡಿಕಾರಿದರು.

ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ನಮ್ಮ ಹಬ್ಬಗಳಿಗೆ ಆಚರಣೆ ಮಾಡಲು ಜಿಲ್ಲಾಧಿಕಾರಿಗಳು ಇಲ್ಲವೇ ಬೇರೊಬ್ಬರು ಏಕೆ ಅನುಮತಿ ಕೊಡಬೇಕು. ಅದರಲ್ಲೂ ಕಲಬುರಗಿಯಲ್ಲಿ ವಿಭಿನ್ನವಾದ ಆಡಳಿತವಿದೆ. ಒಂದು ರೀತಿ ರಿಪಬ್ಲಿಕ್ ಆಫ್ ಕಲಬುರಗಿ ಇದೆ ಎಂದು ಪರೋಕ್ಷವಾಗಿ ಸಚಿವ ಪ್ರಿಯಾಂಕ ಖರ್ಗೆ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

ಬ್ರಿಟಿಷರ ಕಾಲದಲ್ಲೂ ಇಂತಹ ಪರಿಸ್ಥಿತಿ ಇರಲಿಲ್ಲ. ಗಣೇಶ ಉತ್ಸವವನ್ನು ನಮ್ಮ ಹಿಂದೂಗಳು ಶ್ರದ್ಧಾಭಕ್ತಿಯಿಂದ ಆಚರಿಸುತ್ತೇವೆ. ಇದು ನಮ್ಮ ಒಗ್ಗಟ್ಟಿನ ಸಂಕೇತ. ಇದಕ್ಕೆ ಏಕೆ ನಿರ್ಬಂಧ? ಮೊದಲು ತೆಗೆದುಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈಗಾಗಲೇ ಸಭಾನಾಯಕರು ಇದಕ್ಕೆ ಉತ್ತರ ಕೊಟ್ಟಿದ್ದಾರೆ. ನಾನು ಚರ್ಚೆಗೆ ಅವಕಾಶ ಕೊಡುವುದಿಲ್ಲ ಎಂದು ಸಭಾಪತಿ ಹೊರಟ್ಟಿಯವರು ಹೇಳಿದರು.

ಗಲಾಟೆಯ ಮಧ್ಯೆಯೇ ಸಿ.ಟಿ.ರವಿ ಮಾತನಾಡಿ, ಯಾವುದೋ ಒಂದು ಧರ್ಮದ ತುಷ್ಟೀಕರಣಕ್ಕಾಗಿ ನಮ್ಮ ಹಿಂದೂ ಧರ್ಮದ ಹಬ್ಬಗಳಿಗೆ ನಿರ್ಬಂಧ ಹಾಕಲಾಗುತ್ತಿದೆ. ನಿಮಗೆ ಬೇರೆ ಧರ್ಮದ ಹಬ್ಬಗಳಿಗೆ ಇದೇ ನಿರ್ಬಂಧ ಹಾಕುವ ತಾಕತ್ತು ಇಲ್ಲವೇ? ಎಂದು ಪ್ರಶ್ನಿಸಿದರು.

ಆಗ ಮತ್ತೆ ಸದನದಲ್ಲಿ ಕೋಲಾಹಲ ಉಂಟಾಗಿ ಯಾರು, ಏನು ಹೇಳುತ್ತಿದ್ದಾರೆ ಎಂಬುದೇ ತಿಳಿಯಲಿಲ್ಲ. ನಾನು ಈಗಾಗಲೇ ರೂಲಿಂಗ್ ಕೊಟ್ಟಿದ್ದೇನೆ. ಇದರ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಸಭಾಪತಿಗಳು ಪುನರುಚ್ಚರಿಸಿದರು. ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗಲೇ ವಿಧಾನಪರಿಷತ್ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಯಿತು.

ಆಂದೋಲನ ಡೆಸ್ಕ್

Recent Posts

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

15 mins ago

ಹಾರ್ಮುಜ್‌ ಜಲಸಂಧಿ ಬಳಿ ಅಮೇರಿಕಾ ಅಬ್ಬರ: ಇರಾನ್‌ನ 16 ನೌಕೆಗಳು ಧ್ವಂಸ

ಟೆಹರಾನ್:‌ ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…

2 hours ago

90 ದಿನದೊಳಗೆ ಅಂಗನವಾಡಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…

2 hours ago

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…

3 hours ago

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

4 hours ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

4 hours ago