Uncategorized

ಸಂಸತ್‌ ಅಧಿವೇಶನ: ಮೋದಿ ಅದಾನಿ ಏಕ್‌ ಹೈ ಎಂಬ ಜಾಕೆಟ್‌ ಧರಿಸಿ ವಿಪಕ್ಷಗಳ ಪ್ರತಿಭಟನೆ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ.

ಈ ಕುರಿತು ಇಂದು(ಡಿ.5) ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಮೋದಿ ಅದಾನಿ ಏಕ್‌ ಹೈ, ಅದಾನಿ ಸೇಫ್‌ ಹೈ ಎಂದು ಬರೆದಿರುವ ಜಾಕೆಟ್‌ ಧರಿಸಿ ನೂತನ ರೀತಿಯಲ್ಲಿ ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಈ ಸಂದರ್ಭದಲ್ಲಿ ರಾಹುಲ್‌ ಅವರು ಪ್ರತಿಕ್ರಿಯೆ ನೀಡಿ, ಅದಾನಿ ವಿರುದ್ಧ ಮೋದಿ ತನಿಖೆಗೆ ಆದೇಶಿಸಲು ಸಾಧ್ಯವಿಲ್ಲ. ಒಂದು ವೇಳೆ ತನಿಖೆಗೆ ಆದೇಶ ನೀಡಿದರೆ ಸ್ವತಃ ಮೋದಿ ಅವರೇ ತನಿಖೆ ಎದುರಿಸಬೇಕಾಗುತ್ತದೆ. ಮೋದಿ ಮತ್ತು ಅದಾನಿ ವಂಚನೆ ಪ್ರಕರಣದಲ್ಲಿ ಒಂದೇ ಆಗಿದ್ದಾರೆ. ಅವರಿಬ್ಬರು ಬೇರೆ ಬೇರೆ ಅಲ್ಲ, ಒಂದೇ ಆಗಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ವಿಪಕ್ಷ ಸಂಸದರಾದ ಪ್ರಿಯಾಂಕಾ ಗಾಂಧಿ ಅವರು ಸಾಥ್‌ ನೀಡಿದ್ದು, ಅದಾನಿ ಪ್ರಕರಣದ ಬಗ್ಗೆ ತನಿಖೆಗೆ ಆಗ್ರಹಿಸಿ, ಜಂಟಿ ಸಂಸದೀಯ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

7 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

7 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

7 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

7 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

10 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

10 hours ago