Mysore
26
overcast clouds
Light
Dark

ಆಸ್ತಿ ವಿವರಗಳನ್ನು ಸಲ್ಲಿಸದ ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ.

ಇದೀಗ ಲೋಕಾಯುಕ್ತ ಇಲಾಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಹೆಸರನ್ನು ಪ್ರಕಟಿಸಿದೆ. ಗಡುವು ಮುಗಿದರೂ ಸಹ 51 ಶಾಸಕರು ಮತ್ತು 21 ಎಂಎಲ್​ಸಿಗಳು ಇದುವರೆಗೂ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ ಎಂದು ತಿಳಿಸಲಾಗಿದೆ.

ಲೋಕಾಯುಕ್ತ ನಿಯಮ ಏನು?
ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ. ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ನಿಯಮದಂತೆ ಲೊಕಾಯುಕ್ತ ಇಲಾಖೆಯು ಆಸ್ತಿ ವಿವರಗಳನ್ನು ನೀಡದ ಶಾಸಕರು ಮತ್ತು ಎಂಎಲ್‌ಸಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ, ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿ ಇದೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ