ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐಗೆ ಸಲ್ಲಿಸಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೂ ಸಲ್ಲಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.
2013 ರಿಂದ 2018 ರವರೆಗೆ 74.93 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಆರೋಪ ಸಂಬಂಧ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ್ದ ರಾಜ್ಯ ಸರ್ಕಾರವು ಬಳಿಕ ತನಿಖೆ ಲೋಕಾಯುಕ್ತಕ್ಕೆ ವಹಿಸಿತ್ತು. ಈ ಸಂಬಂಧ ಪ್ರಕರಣದ ತನಿಖಾಧಿಕಾರಿ ಎಂ.ಹೆಚ್. ಸತೀಶ್ ಅವರು ಬುಧವಾರ ಡಿಕೆಶಿಗೆ ನೋಟಿಸ್ ನೀಡಿದ್ದಾರೆ. ಈ ಹಿಂದೆ ಸಿಬಿಐ ತನಿಖಾಧಿಕಾರಿಗಳಿಗೆ ಒದಗಿಸಿದ ಮಾಹಿತಿ ಹಾಗೂ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ್ ಏಪ್ರಿಲ್ 1, 2013 ರಿಂದ ಏಪ್ರಿಲ್ 30, 2018 ರ ಅವಧಿಯಲ್ಲಿ ಆದಾಯಕ್ಕೆ ಅಸಮಾನವಾಗಿ 74.93 ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಸಿಬಿಐ ಹೇಳಿತ್ತು. ಈ ಸಂಬಂಧ 2019 ರ ಸೆಪ್ಟೆಂಬರ್ 9 ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಅಂದಿನ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.
ಇದನ್ನು ಪ್ರಶ್ನಿಸಿ ಶಿವಕುಮಾರ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು. ಈ ಸಂಬಂಧ ಸಿಬಿಐ ಕೂಡ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…