‘ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ’ ಎಂಬುದು ಪ್ರಚಲಿತದಲ್ಲಿರುವ ಮಾತು. ಆದರೆ ಇದು ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶಿಕ್ಷಣದ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕು.
ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆ, ಬಾಲ್ಯ ವಿವಾಹ, ಅತ್ಯಾಚಾರ, ಬಡತನ, ಅನಕ್ಷರತೆ, ಲಿಂಗ ತಾರತಮ್ಯ, ಅಪೌಷ್ಟಿಕತೆ ಮುಂತಾದ ಸಮಸ್ಯೆಗಳಿಂದ ಆಧುನಿಕ ಯುಗದಲ್ಲೂ ಹೆಣ್ಣಿಗೆ ಅಭದ್ರತೆ ಕಾಡುತ್ತಿದೆ ಎಂದರೆ ಸಮಾಜ ಇನ್ನೂ ಹಿಂದುಳಿದಿದೆ ಎಂದೇ ಅರ್ಥ. ಕಲಿತ ಹೆಣ್ಣು ಕೂಡ ಉದ್ಯೋಗ ಮಾಡುವ ಸ್ಥಳದಲ್ಲಿ, ವಿದ್ಯಾರ್ಥಿನಿಯರು ಓದುವ ಸ್ಥಳದಲ್ಲಿ , ದೌರ್ಜನ್ಯ, ಕಿರುಕುಳ ಅನುಭವಿಸುತ್ತಿರುವ ಎಷ್ಟೋ ನಿದರ್ಶನಗಳು ನಮ್ಮ ಮುಂದಿವೆ. ಈ ಎಲ್ಲ ತೊಡಕುಗಳನ್ನೂ ನಿವಾರಿಸಬೇಕಾಗಿದೆ.
ಅಲ್ಲದೆ, ವಿವಾಹ ನೋಂದಣಿಯನ್ನು ಕಡ್ಡಾಯಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಲಿಂಗ ಅಸಮಾನತೆಯನ್ನು ತೊಡೆದು ಹಾಕುವ ಮೂಲಕ ಹೆಣ್ಣು ಮಕ್ಕಳು ಶಿಕ್ಷಣ ಪಡೆಯುವುದನ್ನು ಕಡ್ಡಾಯಗೊಳಿಸಿ, ಪ್ರೋತ್ಸಾಹಿಸಬೇಕು. ಹೆಣ್ಣು ಮಕ್ಕಳ ಅಭಿವೃದ್ಧಿ ಹಾಗೂ ಆತ್ಮವಿಶ್ವಾಸಕ್ಕೆ ಪೂರಕವಾದ ಕಾನೂನುಗಳು ಸಮರ್ಪಕವಾಗಿ ಜಾರಿಯಾಗಬೇಕು. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಅಪರಾಽಗಳಿಗೆ ತ್ವರಿತ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ, ಅಽಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸಬೇಕು.
-ಎಂ. ಸೌಂದರ್ಯ, ಪತ್ರಿಕೋದ್ಯಮ ವಿದ್ಯಾರ್ಥಿನಿ,
ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು.





