Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮಡಿಕೇರಿ : ಗ್ಲಾಸ್‌ ಬ್ರಿಡ್ಜ್‌ ನಿರ್ಮಾಣಕ್ಕೆ ಯದುವೀರ್‌ ವಿರೋಧ

ಮಡಿಕೇರಿ : ಸುಂದರ ಪರಿಸರ ತಾಣ ಮಡಿಕೇರಿಯ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಪ್ರಯತ್ನಗಳಿಗೆ ತನ್ನ ಸಂಪೂರ್ಣ ವಿರೋಧವಿದೆ. ಈ ನಿಟ್ಟಿನ ಹೋರಾಟಗಳಿಗೂ ತನ್ನ ಬೆಂಬಲವಿದೆಯೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.

ಕೊಡಗು ಪತ್ರಕರ್ತರ ಸಂಘದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೊಂತಿ ಗಣೇಶ್ ವಿಚಾರ ಪ್ರಸ್ತಾಪಿಸಿ, ಬೆಟ್ಟ ಪ್ರದೇಶಗಳಲ್ಲಿ ಗ್ಲಾಸ್ ಬ್ರಿಡ್ಜ್‌ನಂತಹ ನಿರ್ಮಾಣಗಳಿಂದ ಅನಾಹುತಗಳು ಸಂಭವಿಸುವ ಸಾಧ್ಯತೆ ಹೆಚ್ಚುತ್ತದೆ. ಈಗಾಗಲೇ ಬಿಜೆಪಿ ಪಕ್ಷ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಪರಿಸರದ ತಾಣವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವುದು ಅತ್ಯವಶ್ಯ. ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದರು. ಬಳಿಕ ರಾಜಾಸೀಟ್‌ಗೆ ಸಂಸದರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:
error: Content is protected !!