ಮಡಿಕೇರಿ : ಸುಂದರ ಪರಿಸರ ತಾಣ ಮಡಿಕೇರಿಯ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಿಸುವ ಪ್ರಯತ್ನಗಳಿಗೆ ತನ್ನ ಸಂಪೂರ್ಣ ವಿರೋಧವಿದೆ. ಈ ನಿಟ್ಟಿನ ಹೋರಾಟಗಳಿಗೂ ತನ್ನ ಬೆಂಬಲವಿದೆಯೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.
ಕೊಡಗು ಪತ್ರಕರ್ತರ ಸಂಘದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೊಂತಿ ಗಣೇಶ್ ವಿಚಾರ ಪ್ರಸ್ತಾಪಿಸಿ, ಬೆಟ್ಟ ಪ್ರದೇಶಗಳಲ್ಲಿ ಗ್ಲಾಸ್ ಬ್ರಿಡ್ಜ್‌ನಂತಹ ನಿರ್ಮಾಣಗಳಿಂದ ಅನಾಹುತಗಳು ಸಂಭವಿಸುವ ಸಾಧ್ಯತೆ ಹೆಚ್ಚುತ್ತದೆ. ಈಗಾಗಲೇ ಬಿಜೆಪಿ ಪಕ್ಷ ರಾಜಾಸೀಟ್‌ನಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದೆ ಎಂದು ತಿಳಿಸಿದರು.
ಪರಿಸರದ ತಾಣವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವುದು ಅತ್ಯವಶ್ಯ. ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ತಮ್ಮ ವಿರೋಧವಿದೆ ಎಂದು ತಿಳಿಸಿದರು. ಬಳಿಕ ರಾಜಾಸೀಟ್‌ಗೆ ಸಂಸದರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…